ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಪುತ್ತೂರಿನ ನಿರ್ಮಾಣ್ ಎಸೋಸಿಯೇಟ್ಸ್ ನ ಮಾಲಕರಾದ ಸಚ್ಚಿದಾನಂದ “ಕ್ರೀಡೆ ಸಹ ಶಿಕ್ಷಣದ ಒಂದು ಭಾಗ ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯ ಕಾರಣ ಕ್ರೀಡೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು. ಈ ಮೂಲಕ ಜೀವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು. ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ. ಉತ್ತಮ ವಿದ್ಯಾರ್ಥಿ ಉತ್ತಮ ನಾಗರಿಕನಾಗುತ್ತಾನೆ. ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನು ರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು. ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸೂರ್ಯನಾಥ ಆಳ್ವ ಅವರು ಮಾತನಾಡುತ್ತ “ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ. ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ” ಎಂದು ಹೇಳಿದರು.
ಕಾಲೇಜಿನ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು ಮತ್ತು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕ್ರೀಡಾಮೈದಾನಕ್ಕೆ ಆಕರ್ಷಕವಾಗಿ ಹೊತ್ತು ಸಾಗಿ ಬಂದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ವಿಶೇಷ ಮೆರಗು ನೀಡಿತ್ತು. ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ., ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಗೌಡ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ರೈ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಉಪನ್ಯಾಸಕರಾದ ಶ್ರೀಮತಿ ರೇಣುಕಾ ವಂದಿಸಿದರು. ಶ್ರೀಮತಿ ಮಧುರಾ ಕಾರ್ಯಕ್ರಮವನ್ನು ನಿರೂಪಿಸಿದರು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ, ಶ್ರೀಮತಿ ಹರಿಣಾಕ್ಷಿ ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ವಾಣಿಶ್ರೀ, ಗಿರೀಶ್ ನರೇಂದ್ರ ಪ.ಪೂ.ಕಾಲೇಜಿನ ಕ್ರೀಡಾ ಸಮಿತಿಯ ಸಂಯೋಜಕರ ಸಹಕಾರದಿಂದ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನಡೆಯಿತು.ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.