Sunday, November 24, 2024
ಸುದ್ದಿ

ಇಹಲೋಕ ತ್ಯಜಿಸಿದ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ– ಕಹಳೆ ನ್ಯೂಸ್

ಧಾರವಾಡ : ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದ ನಾಡೋಜ ಚನ್ನವೀರ ಕಣವಿ ಅವರು ಇಂದು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯ ಕಾರಣ ಅವರನ್ನು ಕಳೆದ ಜನವರಿ 14ರಂದು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಖ್ಯಾತರಾಗಿದ್ದ ಕಣವಿ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಸಕ್ಕರೆಪ್ಪ ಮತ್ತು ಪಾರ್ವತವ್ವ ದಂಪತಿಗಳ ಪುತ್ರರಾಗಿ 1928ರ ಜೂನ್ 28ರಂದು ಜನಿಸಿದರು.

ಧಾರವಾಡದಲ್ಲೇ ತಮ್ಮ ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣ ಪೂರೈಸಿದ ಕಣವಿ 1952ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದು ತಾನೆ ಆರಂಭವಾಗಿದ್ದ ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು. 1956ರಲ್ಲಿ ಅದೇ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ ಸಲ್ಲಿಸಿದರು.