Sunday, January 19, 2025
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಜಾಬ್ ವಿವಾದ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ ಫೆ.26 ರವರೆಗೆ ನಿಷೇಧಾಜ್ಞೆ :ಜಿಲ್ಲಾಧಿಕಾರಿ ಆದೇಶ– ಕಹಳೆ ನ್ಯೂಸ್

ಮಂಗಳೂರು : ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆಬ್ರವರಿ 26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಿಸುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ರಾಜ್ಯಾದ್ಯಂತ ಹಿಜಬ್ ವಿವಾದ ತೀವ್ರಗೊಂಡಿದ್ದು, ಕಾಲೇಜು ಮುಂಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು