Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮೈರೋಳ್ತಡ್ಕ ಶಾಲೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮೇಲ್ವಿಚಾರಕಿ ಸುಲೋಚನಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅತಿಥಿಗಳನ್ನು ಸ್ವಾಗತಿಸಿದರು.