Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ವೈಭವ ದಿಂದ ನಡೆದ ಶ್ರೀ ಮನ್ಮಹಾರಥೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಶನಿವಾರ ಅದ್ದೂರಿಯಾಗಿ ಜರಗಿತು.

ಶ್ರೀ ದೇವರ ಉತ್ಸವ, ಶ್ರೀ ಮನ್ಮಹಾರಥೋತ್ಸವ, ಬೂತಬಲಿ , ಕವಾಟ ಬಂಧನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಇಂದಿನ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ್ಲಗುತ್ತು ಸಬ್ರಬೈಲು ಕೆ.ಜಯವರ್ಮರಾಜ ಬಲ್ಲಾಳ್ ಹಾಗೂ ಸಹೋದರ ಸಹೋದರಿಯರು ಮತ್ತು ಕುಟುಂಬಸ್ಥರು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತ ಅನೇಕ ಸಂಘ ಸಂಸ್ಥೆಗಳ ಪ್ರಮುಖರು, ರಾಜಕೀಯ ಪಕ್ಷಗಳ ನೇತಾರರು, ಉದ್ಯಮಿಗಳು, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳ ಮುಖಂಡರುಗಳು , ಊರ- ಪರವೂರಿನ ಸಹಸ್ರಾರು ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.