Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಯುವಕ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸಹೋದರ ಸಂಬಂಧಿಯೊಂದಿಗೆ ನೇತ್ರಾವತಿ ನದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ನಿವಾಸಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಕಬಕ ನಿವಾಸಿಯಾಗಿರುವ ಕಿರಣ್ (20)ಎಂಬಾತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಈ ಘಟನೆ ನಡೆದಿದ್ದು, ಭಾನುವಾರ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದಾಗ ಯುವಕನ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು