Wednesday, January 22, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಹತ್ಯೆ ಕೇಸ್’ನಲ್ಲಿ ಬೆಂಗಳೂರಿನಲ್ಲಿ ಮೂವರು ಜಿಹಾದಿಗಳು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಳಿಕ ಬೆಂಗಳೂರಿನಲ್ಲಿ ಇದೇ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪೊಲೀಸರು ವಶಕ್ಕೆ ಪಡೆದಿರುವಂತ ಹರ್ಷ ಹತ್ಯೆ ಪ್ರಕರಣದ ಆರೋಪಿ ಎನ್ನಲಾದಂತ ವ್ಯಕ್ತಿಯವನ್ನು ವಿಚಾರಣೆ ನಡೆಸುತ್ತಿದ್ದಾರೆ. ಹರ್ಷ ಕೊಲೆಯ ಪ್ರಕರಣದಲ್ಲಿ ಇನ್ನೂ ನಾಲ್ಕೈದು ಆರೋಪಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆಯೂ ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿತ್ತು.

ಇತ್ತ ಬೆಂಗಳೂರಿನಲ್ಲಿಯೂ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ ಜೆಜೆ ನಗರದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು, ಶಿವಮೊಗ್ಗ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ.