Thursday, January 23, 2025
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಮತಾಂದ ಶಕ್ತಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಲಕ್ಷ ರೂಪಾಯಿ ನೀಡಿದ ಕರಾವಳಿಯ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮತಾಂದ ಶಕ್ತಿಗಳಿಂದ ಹತ್ಯೆಯಾದ ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖ ಯುವ ಕಾರ್ಯಕರ್ತ ಹರ್ಷ ನ ಸಾವಿಗೆ ನ್ಯಾಯ ಸಿಗಬೇಕು, ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಒತ್ತಾಯಿಸಿದ್ದಾರೆ.

ಲಕ್ಷ ರೂ ನೀಡಿದ ಶಾಸಕ ರಾಜೇಶ್ ನಾಯ್ಕ್ :

ಜಾಹೀರಾತು
ಜಾಹೀರಾತು
ಜಾಹೀರಾತು

ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಬ್ದಾರಿಯನ್ನು ಹೊಂದಿದ್ದ ಹಿಂದೂ ಸಂಘನೆಯ ಪ್ರಮುಖ ಮತಾಂದ ಶಕ್ತಿಗಳ ಕ್ರೂರ ಕೃತ್ಯಕ್ಕೆ ಬಲಿಯಾದ ಹರ್ಷನ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ ಕುಟುಂಬದ ನಿರ್ವಹಣೆ ಜವಬ್ದಾರಿಗೆ ಕಷ್ಟ ವಾಗಬಾರದು ಎಂಬುದು ಹಿಂದೂ ಸಮಾಜದ ಧ್ಯೇಯ ವಾಗಿದೆ , ಈ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವೈಯಕ್ತಿಕ ನೆಲೆಯಲ್ಲಿ ಅವರ ಬ್ಯಾಂಕ್ ಖಾತೆಯಿಂದ ರೂ ಒಂದು ಲಕ್ಷ ಹಣವನ್ನು ಹರ್ಷ ಅವರ ಕುಟುಂಬದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು