ಪುತ್ತೂರು: ವಿದ್ಯಾಲಯಗಳಲ್ಲಿ ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಪ್ರವಾಸ ಇವೆಲ್ಲ ಇದ್ದರೆ ಮಾತ್ರ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳ ಬೆಳವಣಿಗೆಯೇ ವಿದ್ಯಾಸಂಸ್ಥೆಗಳ ಪ್ರಥಮ ಆದ್ಯತೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾ ಸಂಸ್ಥೆಗಳಾದ ವಸತಿಯುತ ಕಾಲೇಜು ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಪದವಿ ಪೂರ್ವ ವಿದ್ಯಾಲಯದ ಕ್ರೀಡಾಕೂಟ ಸಮಾರೂಪ ಸಮಾರಂಭದಲ್ಲಿ ಮಾತನಾಡಿದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಹಾಗೂ ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕ್ರೀಡಾ ವಿಜೇತರಿಗೆ ಸ್ಮರಣಿಕೆ ಪ್ರಶಸ್ತಿಪತ್ರ ಪ್ರದಾನಿಸಿದರು.
ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪ್ರಾಂಶುಪಾಲ ಶಂಕರನಾರಾಯಣ ಭಟ್ ಹಾಗೂ ಉಪಪ್ರಾಂಶುಪಾಲ ರಾಮಚಂದ್ರ ಭಟ್ ಕೆ, ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಆಂಗ್ಲ ಭಾಷಾ ಉಪನ್ಯಾಸಕಿ ಸುಚಿತ್ರ ಪ್ರಭು ವಿಜೇತರ ಪಟ್ಟಿಯನ್ನು ವಾಚಿಸಿದರು.