ಫೆ.24ರಂದು ಅಳಿಕೆಯಲ್ಲಿ ವಿವೇಕಾನಂದ ಕಾಲೇಜಿನ ವತಿಯಿಂದ ಎನ್‍ಎಸ್‍ಎಸ್ ಕ್ಯಾಂಪ್ – ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕದ ವತಿಯಿಂದ ಕಾಲೇಜಿನ ಐಕ್ಯೂಎಸಿ ಹಾಗೂ ಅಳಿಕೆ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಅಮೃತ ಸಮುದಾಯ ಯೋಜನೆಯಡಿಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ‘ಹಳ್ಳಿಯತ್ತ ನಮ್ಮ ಚಿತ್ತ..’ ಎಂಬ ಘೋಷಣೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2021-2022 ಅಳಿಕೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಡಿಯಾಲದಲ್ಲಿ ಫೆ24ರಿಂದ ಮಾ.2ರವರೆಗೆ ನಡೆಯಲಿದೆ.
ಶ್ರಮದಾನದ ಉದ್ಘಾಟನೆಯು ಫೆ. 24ರಂದು ಪೂವಾಹ್ನ7.30ಕ್ಕೆ ನಡೆಯಲಿದ್ದು, ಅಳಿಕೆ ಗ್ರಾಮಪಂಚಾಯತ್‍ನ ಮಾಜಿ ಅಧ್ಯಕ್ಷ ಭಾಸ್ಕರ ಮಡಿಯಾಲ ನೆರವೇರಿಸಲಿರುವರು. ಸಾಯಂಕಾಲ 5.30ಕ್ಕೆ ಶಿಬಿರದ ಉದ್ಘಾಟನೆಯು ನಡೆಯಲಿದ್ದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ಕೃಷ್ಣಭಟ್ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ವಹಿಸಲಿರುವರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಆಶಯ ನುಡಿಗಳನ್ನಾಡಲಿದ್ದು, ಮುಖ್ಯ ಅಭ್ಯಾಗತರಾಗಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್.,ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಮಾಜಿ ಅಧ್ಯಕ್ಷ ಭಾಸ್ಕರ್ ಮಡಿಯಾಲ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಕಾರ್ಯದರ್ಶಿ ಸುರೇಶ್ ಮಡಿಯಾಲ, ವಿವೇಕಾನಂದ ಮಹಾವಿದ್ಯಾಲಯದ ಐಕ್ಯುಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ. ಎಸ್. , ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ಜಯಪ್ರಕಾಶ್ ಭಾಗವಹಿಸಲಿದ್ದಾರೆ.
ಈ ಶಿಬಿರದ ಸಮಾರೋಪ ಸಮಾರಂಭವು ಮಾ. 2ರಂದು ನಡೆಯಲಿದ್ದು, ಅಳಿಕೆ ಸಹಕಾರಿ ಸೇವಾ ಸಂಘದ ಅಧ್ಯಕ್ಷ ಕಾನ ಈಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಅಳಿಕೆ ಸತ್ಯಸಾಯಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಯಾದವ ನಡುಗುತ್ತು ಅಭಿನಂದನಾ ಭಾಷಣ ಮಾಡಲಿದ್ದು, ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್., ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್., ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಹೇಶ್ ನಿಟಿಲಾಪುರ ಹಾಗೂ ಜೆಡ್ಡು ಆರೋಗ್ಯ ಕೇಂದ್ರ ಡಾ. ಗಣಪತಿ ಭಟ್ ಭಾಗವಹಿಸಲಿರುವರು. ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಸಮಾರೋಪ ಭಾಷಣವನ್ನು ಮಾಡಲಿರುವರು. ಶಿಬಿರದ ಪ್ರತಿ ದಿನ ಶೈಕ್ಷಣಿಕ ಕಾರ್ಯಕ್ರಮಗಳು, ಶ್ರಮದಾನ, ಕ್ರೀಡಾ ಚಟುವಟಿಕೆಗಳು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.