Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

“ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?” : ಹಿಜಾಬ್ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿಗೆ ಅಪರಿಚಿತರಿಂದ ಜೀವ ಬೆದರಿಕೆ- ಕಹಳೆ ನ್ಯೂಸ್

ಮಂಗಳೂರು: ಹಿಜಾಬ್ ಸಂಬಂಧಿಸಿ ಹೇಳಿಕೆ ನೀಡಿದ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಅವರಿಗೆ ಅಪರಿಚಿತರು ಜೀವ ಬೆದರಿಕೆಯೊಡ್ಡಿದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರಯ್ಯ ಅಂಜುಮ್ ಅವರು ಇತ್ತೀಚೆಗೆ ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಧರ್ಮಕ್ಕಿಂತ ದೇಶ ಮೊದಲು, ಶಿಕ್ಷಣಕ್ಕಿಂತ ದೊಡ್ಡ ಧರ್ಮವಿದೆಯಾ?.. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಿ ಸಮಾನತೆ ಕಾಪಾಡ ಬೇಕು ಎಂದು ಲೈವ್ ವೀಡಿಯೋ ಪ್ರಸಾರ ಮಾಡಿದ್ದರು.
ಇದಾದ ಕೆಲವು ದಿನಗಳ ಬಳಿಕ ಅಪರಿಚಿತರ ಫೋನ್, ವೀಡಿಯೋ ಮುಖಾಂತರ ಮಾನಕ್ಕೆ ಕುಂದು ಉಂಟಾಗುವ ರೀತಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುತ್ತಾರೆ. ಇನ್‌ಸ್ಟಾಗ್ರಾಂ ಪೇಜ್‌ಗಳಿಂದ ಮಾನಕ್ಕೆ ಹಾನಿ ಉಂಟಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ವೈರಲ್ ಮಾಡಿರುವುದಲ್ಲದೆ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು