Thursday, January 23, 2025
ದಕ್ಷಿಣ ಕನ್ನಡಸುದ್ದಿ

ದ.ಕ. ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ನಿಷೇಧಾಜ್ಞೆ ಮಾ.5ರವರೆಗೆ ವಿಸ್ತರಣೆ : ಡಾ.ರಾಜೇಂದ್ರ ಕೆ.ವಿ – ಕಹಳೆ ನ್ಯೂಸ್

ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಮಾ.5ರವರೆಗೆ ವಿಸ್ತರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ವಿಧಿಸಿದ್ದ ನಿಷೇಧಾಜ್ಞೆಯ ಅವಧಿ ಫೆ.26ರಂದು ಸಂಜೆ6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಹಿಜಾಬ್-ಕೇಸರಿ ಶಾಲು ವಿವಾದ ಮುಕ್ತಾಯಗೊಳ್ಳದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆ.28ರ ಬೆಳಗ್ಗೆ 6 ಗಂಟೆಯಿAದ ಮಾ.5ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು