Friday, September 20, 2024
ಸುದ್ದಿ

Breaking News : ರಾತ್ರಿಪೂರ್ತಿ ಸುರಿದ ಮಳೆ, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ವರಣನ ಅಬ್ಬರ ; ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ-ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾರಾಷ್ಟ್ರ ಕರಾವಳಿಯಿಂದ ಕೇರಳದವರೆಗೆ ದಟ್ಟಮಾಡಗಳ ಸಾಲು ನಿರ್ಮಾಣವಾಗಿದ್ದು, ಇಂದು (ಜೂನ್ 8 ) ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ಇದರ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು ಜೂ 7 ರಿಂದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ವರದಿಯಾಗಿದೆ.

ಜಾಹೀರಾತು

ಹವಾಮಾನ ಇಲಾಖೆಯ ಸೂಚನೆಯಂತೆ ಜೂನ್ 8 ರಂದು ದಕ್ಷಿಣ ಕನ್ನಡ , ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಅಂದಾಜಿನ ಪ್ರಕಾರ ಜೂನ್ 8 ರಂದು ಈ ಮೂರು ಜಿಲ್ಲೆಗಳಿಲ್ಲಿ 65 ಮಿಮಿ ನಿಂದ 115 ಮಿಮಿ ವರೆಗೆ ಭಾರೀ ಮಳೆ ಸುರಿಯಲಿದೆ. ಸಮುದ್ರದ ಮಟ್ಟದಲ್ಲಿ ಏರಿಕೆ ಯಾಗುವ ಆತಂಕವಿದ್ದು, ಕಡಲ ತೀರದಲ್ಲಿ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಅಲ್ಲದೆ ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ.

ಕಳೆದ ಮೇ 29 ರಂದು ಮಂಗಳೂರಿನಲ್ಲಿ ಸುರಿದ ಮಹಾಮಳೆಗೆ ಮಂಗಳೂರು ನಗರದ ಬಹುತೇಕ ಭಾಗದಲ್ಲಿ ಮಳೆನೀರು ತುಂಬಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರಿಸುಮಾರು 6 ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಹಾಮಳೆಯಿಂದಾಗಿ ಮಂಗಳೂರಿನ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಈಗ ರಾತ್ರಿ ಪೂರ್ತಿ ಮಳೆ ಸುರಿದಿರುವುದರಿಂದ ಭಯದ ವಾತಾವರಣ ಮಂಗಳೂರಿನಲ್ಲಿ ನಿರ್ಮಾಣವಾಗಿದೆ.