ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದ ಪೊಲೀಸ್ ಅಧಿಕಾರಿ: ಆಸ್ಪತ್ರೆ ತಲುಪುವಷ್ಟರಲ್ಲಿ ಸಾವು- ಕಹಳೆ ನ್ಯೂಸ್
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಹಲವಾರು ಮಂದಿ ನಿಂತಲ್ಲಿ-ಕೂತಲ್ಲಿ ಸಾವನ್ನಪ್ಪುತ್ತಿರುವುದು ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಮಂಗಳೂರಿನಲ್ಲೂ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ ಮಾದರ(37) ಸಾವನಪ್ಪಿರುವ ಅಧಿಕಾರಿ.
ಶುಕ್ರವಾರ ಸಂಜೆ 4 ಗಂಟೆಯ ವೇಳೆಗೆ ಪಾಂಡೇಶ್ವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ಕಛೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೊಗುತ್ತಿದ್ದಾಗ, ಎ.ಬಿ .ಶೆಟ್ಟಿ ಸರ್ಕಲ್ ಬಳಿ ಅಸ್ವಸ್ತಗೊಂಡು ಕುಸಿದು ಬಿದ್ದದ್ದಿದ್ದಾರೆ. ತಕ್ಷಣ ಅವರನ್ನು ಆ್ಯಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆೆ.
ಮೂಲತಃ ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.