Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು : ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀಗೆ ಸೂರ್ಯ ರಶ್ಮಿ ಸ್ಪರ್ಶ : ಸೂರ್ಯ ರಶ್ಮಿ ಸ್ಪರ್ಶಿಸುವ ರಾಜ್ಯದ ಎರಡನೇ ದೇವಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದAದು ವಿಶೇಷವಾಗಿ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಷಿಸಲಿರುವ ರಾಜ್ಯದ ಎರಡನೇ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿರುವ ರೈಲು ನಿಲ್ದಾಣದ ಬಳಿಯ ಕಾರಣಿಕ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಗೆ ಮಾ.14ರ ಮೀನ ಸಂಕ್ರಮಣದAದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಗಲಿದೆ. ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯು ನೆರವೇರಲಿದೆ.

ಬೆಳಿಗ್ಗೆ 7 ಗಂಟೆಯಿ0ದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಬರುವ ಸೂರ್ಯನ ಕಿರಣಗಳು ಗರ್ಭಗುಡಿಯಲ್ಲಿ ನೆಲೆಯಾಗಿರುವ ಮಹಾಲಕ್ಷ್ಮೀಯ ಬಿಂಬದ ಮೇಲೆ ಸ್ಪರ್ಶಿಸಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯರವರು ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವರ್ಷದ ಕೊನೆಯ ಮಾಸವಾಗಿರುವ ಮೀನ ಸಂಕ್ರಮಣವು ಸೂರ್ಯ ತನ್ನ ಪಥ ಬದಲಿಸುವ ಮಹತ್ವದ ಘಟ್ಟ. ಮೀನ ಸಂಕ್ರಮಣದAದು ಸೂರ್ಯನ ರಶ್ಮೀ ದೇವಳದ ಗರ್ಭಗುಡಿಯಲ್ಲಿರುವ ಸ್ಪರ್ಶಿಸುವ ಪುಣ್ಯದಿನ. ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನ ಹೊರತು ಪಡಿಸಿದರೆ ಸೂರ್ಯನ ರಶ್ಮಿಯು ಬಿಂಬವನ್ನು ಸ್ಪರ್ಶಿಸುವ ರಾಜ್ಯದ ಎರಡನೇ ದೇವಸ್ಥಾನ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರವಾಗಿದೆ. ಲಕ್ಷ್ಮೀದೇವಿ ಬೆಟ್ಟದಲ್ಲಿ ಬೆಳಗ್ಗಿನ ಜಾವ ಸೂರ್ಯನ ಕಿರಣಗಳು ದೇವಿಯ ಬಿಂಬವನ್ನು ಸ್ಪರ್ಶಿಸಿದರೆ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸಂಜೆ ವೇಳೆ ಸ್ಪರ್ಶಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು