ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಜಾಬ್ ವಿವಾದ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್ – ಕಹಳೆ ನ್ಯೂಸ್
ದೇಶಾದ್ಯಂತ ಭಾರೀ ಸುದ್ದಿಯಾಗಿ, ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ ಈಗ ಅಂತಿಮ ಘಟ್ಟ ತಲುಪಿದೆ. ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದಂತಹ ಹಿಜಾಬ್ ನಿಷೇಧ ಪ್ರಕರಣ ಈಗ ಅಂತಿಮ ಹಂತಕ್ಕೆ ತಲುಪಿದೆ. ಹಿಜಾಬ್ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿದೆ.
ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರಕಾರ ಆದೇಶ ಕಾನೂನು ಬದ್ದವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆಮಾಡುವಂತಿಲ್ಲ ಎಂದು ಮಹತ್ತರ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ತೀರ್ಪು ನೀಡಿ ವಿಚಾರಣೆ ಮುಕ್ತಾಯಗೊಳಿಸಿದೆ.