Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ – ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ; ಮಾಳವಿಕಾ ಅವಿನಾಶ್ ಟ್ವೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು  ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

Khel khatam, Natak Bandh!
Go back to school!
Hon’ble HC says Not an essential part of Islam
Restricting is covered by Reasonable restrictions permitted by the Constitution
Govt empowered to issue the impugned order
All Writs rejected-dismissed #Hijab

— Malavika Avinash (@MalavikaBJP) March 15, 2022

ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು