Thursday, January 23, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ತಾನು ವಾಸವಿದ್ದ ಪಿಜಿಯಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊರ್ವ ತಾನು ವಾಸವಿದ್ದ ಪಿ.ಜಿ. ಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾನೆ.

ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದು, ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರದ ಕಾರಣ ‘ಡೊನೇಶನ್ ನೀಡಿದರೂ ಕಾಲೇಜಿನಲ್ಲಿ ವ್ಯವಸ್ಥೆ ಸರಿಯಿಲ್ಲ. ಪ್ರಾಧ್ಯಾಪಕರೊಬ್ಬರು ನಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡದೆ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡರು. ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದ್ದರಿಂದ ಈ ಲೋಕವನ್ನು ತ್ಯಜಿಸುತ್ತಿದ್ದೇನೆ’ ಎಂದು ಭರತ್, ವಾಟ್ಸ್‍ಆಯಪ್ ಸಂದೇಶವನ್ನು ತಾಯಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಮಂಗಳೂರಿಗೆ ಬಂದಿರುವ ತಂದೆ, ತಾಯಿ ಮಗನ ಸಾವಿಗೆ ಕಾರಣರಾಗಿರುವವರ ವಿರುದ್ಧ ತನಿಖೆ ನಡೆಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಉರ್ವ ಪೆÇಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.