Thursday, January 23, 2025
ಸುದ್ದಿ

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಮೃತದೇಹ ಮಾ.21ರಂದು ತಾಯ್ನಾಡಿಗೆ – ಕಹಳೆ ನ್ಯೂಸ್

ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.

ಮಾ.21 ರಂದು ನಸುಕಿನ ಜಾವ 3 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ನವೀನ್ ಮೃತದೇಹ ಆಗಮಿಸಲಿದ್ದು, ಪಾರ್ಥಿವ ಶರೀರ ಆಗಮಿಸಿದ ನಂತರ ಅದಕ್ಕೆ ಪೂಜೆ ಸಲ್ಲಿಸಿ ಬೆಳಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಆ ನಂತರ ನವೀನ್ ತಂದೆಯ ಇಚ್ಚೆಯಂತೆ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ರವಾನೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು