Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ – ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಬೇಕಾದ್ದು ಅತ್ಯಂತ ಅಗತ್ಯ. ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ದೊರಕಿದಾಗ ಮಾತ್ರ ಉತ್ಕøಷ್ಟ ವ್ಯಕ್ತಿತ್ವ ನಿರ್ಮಾಣಗೊಳ್ಳಬಹುದು. ಆದ್ದರಿಂದ ವಿದ್ಯಾಸಂಸ್ಥೆಗೆ ಮಕ್ಕಳನ್ನು ಸೇರಿಸುವಾಗ ಅಲ್ಲಿ ದೊರಕುವಂತಹ ಶಿಕ್ಷಣದ ಗುಣಮಟ್ಟವನ್ನು ಗಮನಿಸಿ ಕಾರ್ಯಪ್ರವೃತ್ತರಾಗಬೇಕಾದ ಜವಾಬ್ದಾರಿ ಹೆತ್ತವರ ಮೇಲಿದೆ. ಅಂಬಿಕಾ ಪದವಿ ಮಹಾವಿದ್ಯಾಲಯವು ಹೆತ್ತವರಿಗೆ ತಮ್ಮ ಮಕ್ಕಳ ಬಗೆಗಿರುವ ಕನಸುಗಳನ್ನು ನನಸಾಗಿಸುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಹೇಳಿದರು.

ಅವರು ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮಕ್ಕಳ ಮೇಲೆ ಪ್ರೀತಿ ಇರಬೇಕಾದದ್ದು ಎಷ್ಟು ಮುಖ್ಯವೋ, ಗಮನ ಇರಬೇಕಾದದ್ದೂ ಅಷ್ಟೇ ಮುಖ್ಯ. ಒಂದು ಕಣ್ಣು ಕಾಳಜಿಯಿಂದ ಮಕ್ಕಳನ್ನು ನೋಡಿದರೆ ಮತ್ತೊಂದು ಕಣ್ಣು ಅನುಮಾನದಿಂದ ನೋಡಬೇಕು. ನಮ್ಮ ಗಮನಿಸುವಿಕೆಯಲ್ಲಿ ತುಸು ನಿರ್ಲಕ್ಷ ಕಂಡುಬಂದರೂ ಮಕ್ಕಳು ನಮ್ಮ ಕೈಮೀರಿ ಹೋಗುವ ಸಾಧ್ಯತೆಗಳಿವೆ. ಈ ನೆಲೆಯಲ್ಲಿ ಹೆತ್ತವರಿಗೆ ಅಪಾರ ಜವಾಬ್ದಾರಿಗಳಿವೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ರಾಮ ಭಟ್ ಕೆದಿಮಾರು, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಣೇಶ ಪ್ರಸಾದ್ ಎ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ ಕುಮಾರ್ ಕಮ್ಮಜೆ ಕಾರ್ಯಕ್ರಮ ನಿರ್ವಹಿಸಿದರು,