Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ನಂದಿಗುಡ್ಡೆಯ ಫ್ಲಾಟ್‍ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣ : ಬಂಧಿತರ ಸಂಖ್ಯೆ 16ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು: ನಂದಿಗುಡ್ಡದಲ್ಲಿರುವ ಫ್ಲ್ಯಾಟ್‍ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‍ಮೇಲ್ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ, ಮಹಿಳೆ ಮತ್ತು ಯುವತಿಯರ ಮಾನವ ಕಳ್ಳ ಸಾಗಾಣಿಕೆ, ಪ್ರಕರಣ ಗಳಿಗೆ ಸಂಬಂಧಪಟ್ಟಂತೆ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಪ್ರಕರಣದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಪೆÇಲೀಸರು ಮಾ.18 ರಂದು ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೆÇಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು, ಮಂಗಳೂರು ಸಿಸಿಬಿ ಪೆÇಲೀಸರು ಈಗಾಗಲೇ ತನಿಖೆಯನ್ನು ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವ ದಂಧೆಗೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಇದುವರೆಗೆ ಬಂಧಿಸಲಾಗಿದ್ದು, ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಸಿಬಿ ತಿಳಿಸಿದೆ.