Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರವನ್ನು ಮಾ.21ರಂದು ದೇವಳದ ಹೊರಾಂಗಣದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಳದ ಪ್ರಧಾನ ಅರ್ಚಕರಾದ ವಸಂತ ಕೆದಿಲಾಯ ಅವರು ಮುದ್ರಿತ ಆಮಂತ್ರಣ ಪತ್ರಿಕೆಯನ್ನು ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆಮಂತ್ರಣ ಪತ್ರಕ್ಕೆ ಗಂಧ ಪ್ರಸಾದ ಲೇಪಿಸಿ ಪವಿತ್ರಗೊಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ ನಾರಾವಿ, ಬಿ. ಐತ್ತಪ್ಪ ನಾಯ್ಕ, ಬಿ.ಕೆ. ವೀಣಾ, ರಾಮ್ ದಾಸ್ ಗೌಡ, ಡಾ.ಸುಧಾ ಎಸ್. ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಉಪನ್ಯಾಸಕ ಡಾ| ರಾಜೇಶ್ ಬೆಜ್ಜಂಗಳ, ರೋಟರಿ ಸದಸ್ಯ ವಿಶ್ವಾಸ್ ಶೆಣೈ, ಕೆಡಿಪಿ ಸದಸ್ಯ ವಿಜಯ ಬಿ.ಎಸ್, ದೇವಳದ ಮಾಜಿ ಆಡಳಿತಾಧಿಕಾರಿ ಸೂರಪ್ಪಗೌಡ, ಗೋಪಾಲ್ ನಾೈಕ್ ಮತ್ತಿತರರು ಉಪಸ್ಥಿತರಿದ್ದರು.