ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯಲು ಹೆಚ್ಚಿನ ಅವಕಾಶ ಕಲ್ಪಿಸಿ ; ಸದನದಲ್ಲಿ ಮನವಿ ಮಾಡಿಕೊಂಡ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್
ಬೆಂಗಳೂರು, ಮಾ. 24 : ಪುತ್ತೂರು ತಾಲೂಕಿನಲ್ಲಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಶಾಸಕ ಸಂಜೀವ ಮಠಂದೂರು ವಿಚಾರ ಪ್ರಸ್ತಾಪಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಗಂಗಾಕಲ್ಯಾಣದಡಿ ಕೊಳವೆ ಬಾವಿ ಕೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಪ್ರಸ್ತಾಪಿಸಿದ್ದಾರೆ. ದ.ಕ. ಜಿಲ್ಲೆಗೆ ದೊಡ್ಡ ಪ್ರಮಾಣದ ಜಲ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ನೀರಿನ ಮೂಲವನ್ನಾಗಿ ಕೊಳವೆಬಾವಿಯನ್ನೇ ಅವಲಂಬಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಕೊಳವೆ ಬಾವಿ ಕೊರೆಯುವುದಕ್ಕೆ ಹೆಚ್ಚಿನ ಅನುಮತಿ ಇಲಾಖೆ ನೀಡಬೇಕು ಎಂದು ಶಾಸಕ ಸಂಜೀವ ಮಠಂದೂರು ಮನವಿ ಮಾಡಿದ್ದಾರೆ.