Recent Posts

Sunday, January 19, 2025
ಕ್ರೈಮ್ರಾಜ್ಯಸುದ್ದಿ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ 88ರ ವೃದ್ಧ ಆತ್ಮಹತ್ಯೆ..! – ಕಹಳೆ ನ್ಯೂಸ್

ಚಂಡೀಗಢ: ವೃದ್ಧನೊಬ್ಬ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದೆ.

ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಿಂದ ವೃದ್ಧನು ಎಲ್ಲಿ ನಾನು ಸಿಕ್ಕಿ ಬೀಳುತ್ತೇನೆ ಎಂಬ ಭಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕಿಯ ತಾಯಿಯು ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ವಿರುದ್ಧ ದೂರು ನೀಡಲು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದ ನಂತರ ವೃದ್ಧನು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಬುಧವಾರ ಫೋಕ್ಸೊ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ವೃದ್ಧನ ಶವವು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೃದ್ಧನ ಶವದ ಹತ್ತಿರ ಯಾವುದೇ ಡೇತ್ ನೋಟ್ ಕಂಡುಬಂದಿಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನನ್ವಯ, ಆ ವೃದ್ಧ ಬಾಲಕಿಗೆ ಸಿಹಿತಿಂಡಿ ಕೊಡಿಸುವುದಾಗಿ ನಂಬಿಸಿದ್ದಾನೆ. ನಂತರ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಆತ ಅತ್ಯಾಚಾರ ನಡೆಸಿರುವ ಬಗ್ಗೆ ನನ್ನ ಮಗಳು ಹೇಳಿದಾಗ ನಾನು ಪೊಲೀಸರ ಬಳಿ ಹೋಗಿ ದೂರು ನೀಡಿದೆ ಎಂದು ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಬಿಲಾಸ್‍ಪುರ ಪೊಲೀಸ್ ಠಾಣೆಯ ಹೆಚ್ಚುವರಿ ಠಾಣಾಧಿಕಾರಿ ಕುಂದನ್ ಸಿಂಗ್, ವೃದ್ಧನ ಸಾವಿನ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅದೇ ಸಮಯದಲ್ಲಿ ಅತ್ಯಾಚಾರ ಪ್ರಕರಣದ ತನಿಖೆಯೂ ನಡೆಯುತ್ತಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು