Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಾ.30ರಂದು ಬಂದಾರು, ಪೆಲತ್ತಿಮಾರಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ 20ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಬಂದಾರು : ಮಾ.30ರಂದು ಬಂದಾರು, ಪೆಲತ್ತಿಮಾರಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಂದಾರು ಒಕ್ಕೂಟ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ, ಬಂದಾರು ಇವರ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ ಪೂಜಾ ಪುನರಾರಂಭದ 20ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮದ್ಯಾಹ್ನ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಪುತ್ತೂರಿನ ಶ್ರೀ ಮಹಾದೇವಿ ಭಜನಾ ಮಂಡಳಿ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ದೇವರಿಗೆ ದುರ್ಗಾ ಪೂಜೆ ಹಾಗು ರಂಗಪೂಜೆ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮದ ಬಳಿಕ ಕಲ್ಲಡ್ಕ ವಿಠಲ ನಾಯ್ಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಜರುಗಲಿದೆ.

ದೇವಸ್ಥಾನದ ಅಧ್ಯಕ್ಷರಾದ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷರಾದ ರಾಧಕೃಷ್ಣ ಗೌಡ ಕಬಿಲಾಲಿ ಪ್ರಧಾನ ಅರ್ಚಕರಾದ ಕೆ. ದೇವಿಪ್ರಸಾದ್ ಹೊಳ್ಳ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಲ್ಲಿ ಎಲ್ಲಾ ಕಾರ್ಯಕ್ರಮ ನಡೆಯಲಿದೆ.