ನವದೆಹಲಿ(ಅ.04): ‘ಭಾರತೀಯ ನೆಲದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು ಎದುರಿಸಲು ಆಸ್ಟ್ರೇಲಿಯಾ ಆಟಗಾರರು ಭಯ ಪಡುತ್ತಿದ್ದಾರೆ’.ಹೀಗೆಂದು ಹೇಳಿರುವುದು ಆಸ್ಟ್ರೇಲಿಯಾ ತಂಡದ ಹಂಗಾಮಿ ಕೋಚ್ ಡೇವಿಡ್ ಸಾಕೆರ್.
ಭಾರತ ವಿರುದ್ಧ ಏಕದಿನ ಸರಣಿಯಲ್ಲಿ 1-4ರ ಅಂತರದಲ್ಲಿ ಸೋಲು ಅನುಭವಿಸಿದ ಬಳಿಕ, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅಭಿಮಾನಿಗಳು ತಮ್ಮ ತಂಡ ಟಿ20 ಸರಣಿಯಲ್ಲಾದರೂ ಪುಟಿದೇಳಲಿದೆ ಎನ್ನುವ ನಂಬಿಕೆಯಿಟ್ಟುಕೊಂಡಿದ್ದಾರೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಡೇವಿಡ್ ಆಘಾತಕಾರಿ ವಿಷಯವನ್ನು ಬಹಿರಂಗಗೊಳಿಸಿದ್ದಾರೆ.
‘ಆಟಗಾರರ ಮನಸ್ಥಿತಿಯೇ ಸೋಲಿಗೆ ಕಾರಣ. ಬಹುತೇಕ ಆಟಗಾರರು ಭಯಗೊಂಡಿದ್ದು, ಅದು ದೂರವಾಗುವವರೆಗೂ ಧನಾತ್ಮಕ ಫಲಿತಾಂಶ ಸಿಗುವುದಿಲ್ಲ. ಆಟಗಾರರು ಹೆಚ್ಚು ಆತ್ಮವಿಶ್ವಾಸದೊಂದಿಗೆ ಆಡಬೇಕು, ನೈಜ ಆಟ ಪ್ರದರ್ಶಿಸಬೇಕು ಎನ್ನುವ ಕಾರಣದಿಂದ ಸಹಾಯಕ ಸಿಬ್ಬಂದಿ ಸಕಲ ಪ್ರಯತ್ನಗಳನ್ನು ನಡೆಸುತ್ತಿದೆ. ಆದರೆ ಸತತವಾಗಿ ಸೋಲುತ್ತಿರುವಾಗ ಮೈದಾನಕ್ಕಿಳಿದಾಗ ಭಯಗೊಳ್ಳುವುದು ಸಹಜ. ಆದಷ್ಟು ಬೇಗ ಸಮಸ್ಯೆಗಳು ಬಗೆಹರಿಯಲಿವೆ’ ಎಂದು ಸಾಕೆರ್ ಕ್ರಿಕೆಟ್ ಆಸ್ಟ್ರೇಲಿಯಾ ವೆಬ್’ಸೈಟ್’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
2019ರ ವಿಶ್ವಕಪ್’ಗೆ ಅಗ್ರ ತಂಡಗಳು ತಯಾರಿ ಆರಂಭಿಸಿದ್ದು, ಆಸ್ಟ್ರೇಲಿಯಾ ಇನ್ನೂ ಸಮಸ್ಯೆಗಳನ್ನು ಪಟ್ಟಿ ಮಾಡುವುದರಲ್ಲೇ ತೊಡಗಿದೆ ಎನ್ನುವುದಕ್ಕೆ ಪ್ರತಿಕ್ರಿಯಿಸಿರುವ ಸಾಕೆರ್ ‘ಖಂಡಿತವಾಗಿಯೂ ತವರಿನಾಚೆ ನಮ್ಮ ಪ್ರದರ್ಶನ ತೀರಾ ಕಳಪೆಯಾಗಿದೆ. ವಿಶ್ವಕಪ್ ಕೂಡ ತವರಿನಾಚೆಯೇ ನಡೆಯಲಿದ್ದು, ಅದಕ್ಕೆ ತಯಾರಿ ಆರಂಭಿಸಲಿದ್ದೇವೆ. ತಂಡದಲ್ಲಿ ಪ್ರತಿಭಾನ್ವಿತರಿದ್ದಾರೆ. ತಂಡದ ಸಂಯೋಜನೆ ಕುರಿತು ಚಿಂತನೆ ನಡೆಸಬೇಕಾದ ಅನಿವಾರ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.
You Might Also Like
ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ...
ಬಂಟ್ವಾಳ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಬೈದಶ್ರೀ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ: ಕ್ರೀಡೆಯ ಮೂಲಕ ಅಶಕ್ತರ ಬಾಳಿನಲ್ಲಿ ಬೆಳಕು ಮೂಡಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಅರ್ಜುನ್ ಭಂಡಾರ್ಕರ್ – ಕಹಳೆ ನ್ಯೂಸ್
ಬಂಟ್ವಾಳ : ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ...
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು...
ಅ. 28 ಮತ್ತು 29ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿಯಲ್ಲಿ 2024-25 ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ – ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟ – ಕಹಳೆ ನ್ಯೂಸ್
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ...