Monday, January 20, 2025
ರಾಜ್ಯಸುದ್ದಿ

9ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು : ದೇಶದಲ್ಲಿ ಮತ್ತೆ ಪೆಟ್ರೋಲ್ ಬೆಲೆ ಡಿಸೇಲ್ ಬೆಲೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದು ವಾರದಲ್ಲಿ ಲೀಟರ್ ಗೆ 6.40 ರೂ. ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು