ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
93 ವರ್ಷದ ವಾಜಪೇಯಿ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ.
ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. 1924ರಲ್ಲಿ ಜನಿಸಿದ ವಾಜಪೇಯಿ ಅವರು 1942 `ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.