ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಕಳೆದ 4 ದಶಕಗಳಿಂದ ಶಿಕ್ಷಣದ ಜೊತೆಜೊತೆಗೆ ಸಂಸ್ಕಾರವನ್ನು ನೀಡುತ್ತಾ ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಇದೀಗ ಒಂದು ಹೆಜ್ಜೆ ಮುಂದೆಯಿಡುತ್ತಾ ಹೊಸ ಶೈಕ್ಷಣಿಕ ನೀತಿ 2020ರ ಆಧಾರದ ಮೇಲೆ ಒಂಭತ್ತರಿಂದ ಹನ್ನೆರಡನೇ ತರಗತಿಯವರೆಗೆ ಶಿಕ್ಷಣವನ್ನು ನೀಡಲು ಶ್ರೀರಾಮ ಸೆಕೆಂಡರಿ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ್ನು ಪಾರಂಭಿಸುತ್ತಿದೆ. ಇದರ ಕಛೇರಿಯನ್ನು ಸಾದ್ವಿ ಶ್ರೀ ಮಾತಾನಂದಮಯಿ ಶ್ರೀಕ್ಷೇತ್ರ ಒಡಿಯೂರು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ತಿರುಮಲೇಶ್ವರ ಪ್ರಶಾಂತ್ ಇವರನ್ನು ಹಿರಿಯರ ಸಮ್ಮುಖದಲ್ಲಿ ಸೆಕೆಂಡರಿ ಸ್ಕೂಲ್‍ನ ಉಪಪ್ರಾಂಶುಪಾಲರನ್ನಾಗಿ ನಿಯುಕ್ತಿಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಡಾ. ಭೀಮೇಶ್ವರ ಜೋಶಿ ದಂಪತಿಗಳು ಶ್ರೀಕ್ಷೇತ್ರ ಹೊರನಾಡು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇದರ ಅಧ್ಯಕ್ಷರಾದ ಡಾ ಸಿ. ಸೋಮಶೇಖರ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾದ ಡಾ ಚಂದ್ರಶೇಖರ ಕೆರಾಡಿ, ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತಮಾಧವ, ಸಹಸಂಚಾಲಕರಾದ ರಮೇಶ್ ಎನ್, ಪದವಿ ಪೂರ್ವವಿಭಾಗದ ಪ್ರಾಂಶುಪಾಲರಾದ ವಸಂತ ಬಲ್ಲಾಳ್, ಪದವಿ ವಿಭಾಗದ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್‍ಕಟ್ಟೆ, ವಿಭಾಗ ಪ್ರಮುಖರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.