Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು: ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ದಾರುಣ ಸಾವು- ಕಹಳೆ ನ್ಯೂಸ್

ಮಂಗಳೂರು: ವಿಷಾನಿಲ ಸೋರಿಕೆಯಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆಯ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸಮೀರುಲ್ ಇಸ್ಲಾಮ್, ಉಮಾರ್ ಫಾರೂಕ್ ಹಾಗೂ ನಿಜಾಮುದ್ದೀನ್ ಸಾಬ್ ಎಂಬ ಕಾರ್ಮಿಕರು ರಾತ್ರಿಯೇ ಮೃತಪಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಾಫತ್ ಅಲಿ ಎಂಬವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ವಿಷ ಅನಿಲ ಸೋರಿಕೆಯಂತಹ ಅಪಾಯಗಳು ಇದ್ದರೂ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ಇರುವುದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಸಂಬ0ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ , ಮ್ಯಾನೇಜರ್ ಕುಬೇರ್ ಗಾಡೆ , ಸೂಪರ್ ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.