Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅದಲು -ಬದಲಾದ ಬಾಟಲಿ, ಆಲ್ಕೋಹಾಲ್ ಎಂದು ಭಾವಿಸಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಬಾಬು ಎಂದು ಗುರುತಿಸಲಾಗಿದ್ದು, ಬಾಬು ಅವರು ರಬ್ಬರ್ ಶೆಡ್ ಗೆ ಮದ್ಯ ಹಾಗೂ ಆಸಿಡ್ ಬಾಟಲಿ ತೆಗೆದುಕೊಂಡು ಹೋಗಿದ್ದು ಒಂದೆಡೆ ಇಟ್ಟಿದ್ದರು. ಬಳಿಕ ಮದ್ಯದ ಬಾಟಲಿ ಎಂದು ಭಾವಿಸಿ ಆಸಿಡ್ ಬಾಟಲಿ ತೆಗೆದು ಕುಡಿದ್ದರು. ಇದರಿಂದ ಅಸ್ವಸ್ಥಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು