Monday, January 20, 2025
ದಕ್ಷಿಣ ಕನ್ನಡಸುದ್ದಿ

ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಹಲ್ಲೆ : ಮಂಗಳೂರಿನ ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರ ಅಮಾನತ್ತು – ಕಹಳೆ ನ್ಯೂಸ್

ಪೊಲೀಸ್ ಠಾಣೆಯಲ್ಲಿ ವಿನಾಕಾರಣ ಹಿಂದೂ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರಿನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನ ಅಮಾನತ್ತು ಮಾಡಿದ ಘಟನೆ‌ ಬೆಳಕಿಗೆ ಬಂದಿದೆ.. 

ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ  ಪೋಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಸಯ್ಯದ್ ಇಮ್ತಿಯಾಸ್, ಪ್ರವೀಣ್, ಸುನೀಲ್ ಇವರನ್ನ ಸಸ್ಪೆಂಡ್ ಮಾಡುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ಹಿಂದೂ ಕಾರ್ಯಕರ್ತರು ಕಟೀಲು ಶ್ರೀ ದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ಹಾಗೂ ಎಳನೀರು ವ್ಯಾಪಾರಿಗೆ ವ್ಯಾಪಾರ ನಡೆಸದಂತೆ ಅಡ್ಡಿಪಡಿಸಿದ್ದರು ಎಂಬ ದೂರಿನ ಮೇರೆಗೆ ಕಳೆದ ಶನಿವಾರ

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ಕಾರ್ಯಕರ್ತರನ್ನ ಠಾಣೆಗೆ ಕರೆಸಿ ಈ ಐದು ಜನ ಪೊಲೀಸರು ಮೂವರು ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಪೊಲೀಸ್ ಠಾಣೆಯಲ್ಲಿ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಕೊಟ್ಟಿದ್ದರು.

ಈ ವಿಚಾರವಾಗಿ ಇದೀಗ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನ ಅಮಾನತ್ತು ಮಾಡುವಂತೆ‌ ಮಂಗಳೂರು ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಆದೇಶ ನೀಡಿದ್ದಾರೆ.