Friday, November 22, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಎಂ.ಆರ್.ಪಿ. ಎಲ್. ನ ಸಿ.ಎಸ್. ಆರ್. ನಿಧಿಯಿಂದ 66.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ’10 ಕೊಠಡಿಗಳ ಕಾಮಗಾರಿಗಳ ಉದ್ಘಾಟನಾ ಸಮಾರಂಭ’ ಮತ್ತು ಶಾಲಾ‘ಶತಮಾನೋತ್ಸವ’ ಕಾರ್ಯಕ್ರಮ -ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಎಂ.ಆರ್.ಪಿ. ಎಲ್. ನ ಸಿ.ಎಸ್. ಆರ್. ನಿಧಿಯಿಂದ 66.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ’10 ಕೊಠಡಿಗಳ ಹಾಗೂ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ವತಿಯಿಂದ ಸುಮಾರು 10.5 ಲಕ್ಷ ವೆಚ್ಚದಲ್ಲಿ ಮಾಡಿದ ಶಾಲಾ ಕಟ್ಟಡಕ್ಕೆ ಸಮತಟ್ಟು, ಶಾಲಾ ಕಟ್ಟಡಕ್ಕೆ ಮುಖಮಂಟಪ ಹಾಗೂ ಆಟದ ಮೈದಾನ ವಿಸ್ತರಣಾ ಕಾಮಗಾರಿಗಳ ಉದ್ಘಾಟನಾ ಸಮಾರಂಭ’ ಮತ್ತು ಶಾಲಾ‘ಶತಮಾನೋತ್ಸವ’ ಕಾರ್ಯಕ್ರಮ ಮೇ.1 ರಂದು ನಡೆಯಲಿದೆ.

ಮೇ.1 ರಂದು ಅಪರಾಹ್ನ 3 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ರವರು ನೆರವೇರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ರವರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್. ಎಲ್. ಬೋಜೆ ಗೌಡ, ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್, ಮಾಜಿ ಸಚಿವರಾದ ರಮಾನಾಥ್ ರೈ, ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಎಂ ಆರ್ ಪಿ ಎಲ್ ನ ಮಾನ್ಯ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥ ಸಂತೋಷ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್ ಎಂ.ಪಿ., ಪ್ರಗತಿಪರ ಕೃಷಿಕರಾದ ತಿರುಮಲ ಕುಮಾರ್ ಮಜಿ, ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಅಂಚನ್, ವಿಟ್ಲ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ್ ಸಾಲಿಯಾನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಂಜುಳಾ ಮಾವೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಾಧವ ಮಾವೆ ,ಗೀತ ಚಂದ್ರಶೇಖರ್, ವೀರಕಂಭ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ನಿರ್ಮಲಾ ವೇಗಸ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಒಡಿಯೂರು ಗ್ರಾಮ ವಿಕಾಸ ಯೋಜನೆಯ ನಿರ್ದೇಶಕರಾದ ಕಿರಣ್ , ಲಯನ್ಸ್ ಜಿಲ್ಲಾ ರಾಜ್ಯಪಾಲ ವಸಂತ್ ಕುಮಾರ್ ಶೆಟ್ಟಿ, ರೋಟರಿ ಕ್ಲಬ್ಬಿನ ನಿಯೋಜಿತ ರಾಜ್ಯಪಾಲ ಪ್ರಕಾಶ್ ಕಾರಂತ್, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಫೋಟೋಗ್ರಾಫರ್ ಅಸೋಶಿಯೇಶನ್ ಅಧ್ಯಕ್ಷ ಆನಂದ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹೆಜ್ಜೆ ಗೆಜ್ಜೆ ನಿನಾದ ವೈವಿಧ್ಯ ನಡೆಯಲಿರುವುದು. ಬಲಿಕ ತಾಂಬೂಲ ಕಲಾವಿದರು ಪುಂಜಾಲಕಟ್ಟೆ ಇವರಿಂದ ಇಂಚಲ ಉಂಡಾ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ