Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲದ ನೀರುಮಾರ್ಗ ಮಹಾಶಕ್ತಿ ಕೇಂದ್ರದ ವತಿಯಿಂದ, ಡಾ.ಭರತ್ ಶೆಟ್ಟಿಯವರ ಸಾರಥ್ಯದಲ್ಲಿ ಅಡ್ಯಾರ್ ಮೈದಾನದಲ್ಲಿ ಕಾರ್ಯಕರ್ತರಿಗಾಗಿ ನಡೆದ ಕ್ರೀಡಾಹಬ್ಬ – ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲದ ನೀರುಮಾರ್ಗ ಮಹಾಶಕ್ತಿ ಕೇಂದ್ರದ ವತಿಯಿಂದ ಮಹಾಶಕ್ತಿ ಕೇಂದ್ರದ 9 ಶಕ್ತಿಕೇಂದ್ರದ ಕೂಡುವಿಕೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಾರಥ್ಯದಲ್ಲಿ ಕ್ರೀಡಾ ಹಬ್ಬವನ್ನು ಆಯೋಜಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಡ್ಯಾರ್ ಮೈದಾನದಲ್ಲಿ ನಡೆದ ಕ್ರೀಡಾಹಬ್ಬದಲ್ಲಿ ಕಾರ್ಯಕರ್ತರಿಗಾಗಿ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ಸಹಿತ ವಿವಿಧ ಪಂದ್ಯಾವಳಿಗಳು ನಡೆದವು.
ವಿಶೇಷ ಸಾಧನೆ ಮಾಡಿದ ಸಾಧಕರನ್ನು ಗಣ್ಯರು ಅಭಿನಂದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಭಾಜಪಾ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದಿರೆ, ಶಾಸಕರಾದ ಡಾ.ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಉತ್ತರ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ವಕ್ತಾರರಾದ ಜಗದೀಶ್ ಶೇಣವ,ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ. ಕಾರ್ಪೋರೇಟರ್ ಗಳು,ಸಹಿತ ಮಹಾ ಶಕ್ತಿಕೇಂದ್ರದ ಪ್ರಮುಖರು, ಶಕ್ತಿಕೇಂದ್ರದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.