Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕರು ಜಲ್ಲಿಗುಡ್ಡೆ ಸಾಯಿ ಜನರಲ್ ಸ್ಟೋರ್ ಬಳಿಯಿಂದ ಮೈರಗುತ್ತುವರೆಗಿನ ರಸ್ತೆ ಅಭಿವೃದ್ಧಿಪಡಿಸಲು ಸ್ಥಳೀಯ ನಾಗರಿಕರು ಮನವಿ ಸಲ್ಲಿಸಿದಂತೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದೇವೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದ್ದು ಸಾರ್ವಜನಿಕರ ಸಹಕಾರದಿಂದ ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೆಟರ್ ಅಶ್ರಫ್, ಬಿಜೆಪಿ ಮುಖಂಡರಾದ ಕಿರಣ್ ರೈ ಎಕ್ಕೂರು, ಚಂದ್ರಶೇಖರ, ರಾಜೇಶ್ ಶೆಟ್ಟಿ, ಗಣೇಶ್, ಸೀತಾರಾಮ ಪೂಜಾರಿ, ಯಶವಂತ್ ಶೆಟ್ಟಿ, ನವೀನ್ ಮೈರಗುತ್ತು, ಸಲೀಂ ಬೆಂಗ್ರೆ, ರಾಜೇಶ್, ಗಣೇಶ್ ಪೂಜಾರಿ, ಶಕುಂತಲ, ಸ್ಮಿತಾ, ಪಾಲಿಕೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು