ಮೇ 08ರಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ನೆಲಪ್ಪಾಲು ಶ್ರೀವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀರಾಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು: ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಮೇ 08ರಂದು ನೆಲಪ್ಪಾಲು ಶ್ರೀವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀರಾಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭ ಬಜರಂಗದಳ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ,ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರ್ ಪಂಜ ,ಕಾರ್ಯದರ್ಶಿ ಸತೀಶ್ ಬಿ ಎಸ್, ಮಾತೃಶಕ್ತ ಪ್ರಮುಖೆ ಜ್ಯೋತಿ ನಾಯಕ್, ಚಂದ್ರಶೇಖರ ಶೆಟ್ಟಿ, ರೂಪೇಶ್ ಬಲ್ನಾಡು, ಜೀವನ್ ಬಲ್ನಾಡು ಮತ್ತಿತರರು ಉಪಸ್ಥಿತರಿದ್ದರು.