Thursday, January 23, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ – ಕಹಳೆ ನ್ಯೂಸ್

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಸಾಂತ್ವನ ನೀಡಿದ್ದಾರೆ.

ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪಿದ್ದಾಳೆ. ಮೇಲ್ನೋಟಕ್ಕೆ ಈ ಪ್ರಕರಣ ಆತ್ಮಹತ್ಯೆ ಎಂದು ದಾಖಲಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ. ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ, ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ ಎಂದು ಆ ಹುಡುಗಿಯ ಮನೆಯವರು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದೂ ಪರಿಷತ್ತಿನ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ ಹುಡುಗಿಯ ಮನೆಗೆ ಹೋಗಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ ಅಲ್ಲದೆ, ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯನ್ನು ಖಂಡಿಸಿ ಮೇ. 9ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮಂಗಳೂರು ವಿಭಾಗದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ತಿರ್ಮಾನಿಸಲಾಗಿದೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ, ಬಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ, ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ್ ಚಂದ್ರಹಾಸ ಕನ್ಯಾನ,ಸಹ ಸಂಚಾಲಕ್ ಯತೀಶ್ ಪೆರುವಾಯಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು