Thursday, January 23, 2025
ಉಡುಪಿರಾಜಕೀಯಸುದ್ದಿ

ಕಾಂಗ್ರೆಸ್‍ಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗುಡ್‍ಬೈ – ಕಹಳೆ ನ್ಯೂಸ್

ಉಡುಪಿ : ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಸರ್ಕಾರದಲ್ಲಿ ಮಾಜಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ಗೆ ರಾಜೀನಾಮೆ ಪತ್ರ ರವಾನಿಸಿದರು. ಹಲವಾರು ದಿನಗಳಲ್ಲಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಸೂಚನೆ ಇತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿ ಚುನಾವಣಾ ಕಣಕ್ಕೆ ಇಳಿದು ಸೋತಿದ್ದರು. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಜಂಟಿ ಅಭ್ಯರ್ಥಿಯೆಂದು ಗುರುತಿಸಿಕೊಂಡಿದ್ದ ಮಧ್ವರಾಜ್ ಈ ನಡೆಗೆ ಜಿಲ್ಲಾ ಕಾಂಗ್ರೆಸ್ ನಲ್ಲಿಯೇ ಸಾಕಷ್ಟು ಅಪಸ್ವರಗಳು ಕೇಳಿ ಬಂದಿತ್ತು. ಇದೀಗ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು