Friday, January 24, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಪ್ಯದಲ್ಲಿ ನಡೆಯುವ ನಾಗಮಂಡಲೋತ್ಸವ; ಇಂದು ವಿಶೇಷ ಪ್ರಾರ್ಥನೆ, ಧಾರ್ಮಿಕ ಸಭಾ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಶ್ರೀ ಅನ್ನಪೂಣೇಶ್ವರಿ ಕ್ಷೇತ್ರ ಉದಯಗಿರಿಯಲ್ಲಿ ಮೇ 10 ರಂದು ನಾಗಮಂಡಲೋತ್ಸವ ನಡಯಲಿದ್ದು, ಇಂದು ಮೇ9ರಂದು ಶ್ರೀ ಅನ್ನಪೂರ್ಣೇಶ್ವರಿ ದೇವರ ಮುಂಭಾಗದಲ್ಲಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಮುಖೇನ ವಿಶೇಷ ದೇವತಾ ಪ್ರಾರ್ಥನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು. ಪರಮಾಪೂಜ್ಯ ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರು ದೀಪಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿ ಪುತ್ತೂರು ಇದರ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ,ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಹಸಂಯೋಜನ ಮುರಳಿಕ್ರಷ್ಣ ಹಸಂತಡ್ಕ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು