Thursday, January 23, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು “ತರಂಗ 2022” ವಿಶೇಷ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವ ಜೊತೆಗೆ ಸೂಕ್ತ ಜ್ಞಾನ ನೀಡುವುದು ಅವಶ್ಯಕವಾಗಿದೆ. ಇಂದಿನ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಪರಿವರ್ತನೆ ತಂದು ಕಲಿಕೆಯಲ್ಲಿ ಆಸಕ್ತಿ ಮೂಡಿಸವಂತೆ ಮಾಡುತ್ತದೆ. ಸಮಾಜಕ್ಕೆ ಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು .“ಎಂದು ಬೆಟ್ಟಂಪಾಡಿಯ ನವೋದಯ ಶಾಲೆಯ ನಿಕಟಪೂರ್ವ ಸಂಚಾಲಕರಾದ ಮಂಜಳಗಿರಿ ವೆಂಕಟರಮಣ ಭಟ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಕಾರ್ಯಾಗಾರ ತರಂಗ– 2022 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಕೇಶವ ಮೂರ್ತಿಯವರು ಮಾತನಾಡುತ್ತಾ,” ವಿದ್ಯಾರ್ಥಿಗಳ ಶೈಕ್ಷಣಿಕ, ದೈಹಿಕ, ಮಾನಸಿಕ ಪ್ರಗತಿಯಲ್ಲಿಉತ್ತಮ ಪರಿಸರದ ಪಾತ್ರ ಪ್ರಮುಖವಾಗಿದೆ. ಈ ಸಂಸ್ಥೆಯ ಪ್ರಶಾಂತ ಪರಿಸರ ಹಾಗೂ ಗುಣಮಟ್ಟದ ಬೋಧನೆ ನೀಡುತ್ತಿರುವುದು ಬದಲಾವಣೆಯ ಸಂಕೇತ ಎಂದು ಹೇಳಿದರು.“ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಮಂಜುಗಣೇಶ್ ಸ್ವಾಗತಿಸಿ, ಉಪನ್ಯಾಸಕರಾದ ಶ್ರೀಮತಿ ನಾಗಶ್ರೀ ವಂದಿಸಿದರು. ಶ್ರೀಮತಿ ಮಧುರಾ ಕಾರ್ಯಕ್ರಮ ನಿರೂಪಿಸಿದರು.