Thursday, January 23, 2025
ಉಡುಪಿಸುದ್ದಿ

ಉದ್ಯೋಗ ಸಿಗದ ಹಿನ್ನೆಲೆ ಮನನೊಂದ ಆತ್ಮಹತ್ಯೆಗೆ ಶರಣಾದ ಎಂಬಿಎ ಪದವಿಧರೆ – ಕಹಳೆ ನ್ಯೂಸ್

ಉಡುಪಿ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದ ಎಂಬಿಎ ಪದವಿಧರೆ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯ ಕಾಪುವಿನಲ್ಲಿ ನಡೆಸಿದೆ.

ಉಪ್ಪಿನಂಗಡಿಯ 23 ವರ್ಷದ ಸಹನಾ ಆತ್ಮಹತ್ಯೆಗೆ ಶರಣಾದ ಯುವತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂದುವರೆ ವರ್ಷದ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಮುಗಿಸಿದ್ದ ಸಹನಾ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರು. ಆದರೆ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಸಹನಾ ಆತ್ಮಹತ್ಯೆಯ ದುಡುಕಿನ ನಿರ್ಧಾರ ಮಾಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮಕ್ಕೆ ಏ.30ರಂದು ತನ್ನ ಸಹೋದರಿ ಮನೆಗೆ ಬಂದಿದ್ದ ಸಹನಾ ಅಲ್ಲಿಯೇ ರಾತ್ರಿ ವಿಷ ಸೇವಿಸಿದ್ದಾಳೆ.
ಬೆಳಿಗ್ಗೆ ವಿಪರೀತ ವಾಂತಿ ಮಾಡಿಕೊಳ್ಳುತ್ತಿದ್ದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಸ್ಥಿತಿ ತಲುಪಿದ್ದ ಸಹನಾಳನ್ನು ಮೇ 7ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.