Monday, January 20, 2025
ದಕ್ಷಿಣ ಕನ್ನಡಬಂಟ್ವಾಳ

ವಿಟ್ಲ: ಹೃದಯಾಘಾತಕ್ಕೆ ಬಲಿಯಾದ ಒಂಭತ್ತನೇ ತರಗತಿ ವಿದ್ಯಾರ್ಥಿನಿ..!! – ಕಹಳೆ ನ್ಯೂಸ್

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ವಿಟ್ಲದ
ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದು, ಇದ್ದ ಓರ್ವ ಮಗಳನ್ನು ಕಳೆದುಕೊಂಡ ಪೆÇೀಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನ್ವಿತಾ ಸಾವನ್ನಪ್ಪಿದ ಹಿನ್ನಲೆ ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ರಜೆ ನೀಡಲಾಗಿದ್ದು, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಂಬನಿ ಮೀಡಿದಿದ್ದಾರೆ. ಮೃತ ವಿದ್ಯಾರ್ಥಿನಿ ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು