
ಪುತ್ತೂರು ತಾಲೂಕಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಮಾರ್ಗವಾಗಿ ಬರುತ್ತಿದ್ದ ಕೆ.ಟಿ.ಎಂ ಬೈಕ್ ಮತ್ತು ಪುತ್ತೂರಿನ ಇಂದಿರಾ ಕ್ಯಾಂಟೀನ್ ಬಳಿ ಒಳರಸ್ತೆಯಾಗಿ ಬಂದ ಟೊಯೋಟಾ ಈಟಿಯೋಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಯ್ಯಲಾಗಿದ್ದು ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.