Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಭಾರೀ ಮಳೆ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಮೇ 19 : ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಈ ನಡುವೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು