Recent Posts

Sunday, January 19, 2025
ಅಂತಾರಾಷ್ಟ್ರೀಯಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಭಯೋತ್ಪಾದನೆಗೆ ಆರ್ಥಿಕ ನೆರವು ; ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ನವದೆಹಲಿ, ಮೇ 19 : ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅನ್ನು ದೋಷಿ ಎಂದು ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಘೋಷಿಸಿದೆ.


ನ್ಯಾಯಾಲಯ ಯಾಸಿನ್ ಮಲಿಕ್ನ  ಹಣಕಾಸಿನ ಮೌಲ್ಯಮಾಪನಕ್ಕೆ ಸಂಬಂಧಿಸಿದ ಅಫಿಡವಿಟ್ ಕೇಳಿದೆ. ಅಲ್ಲದೆ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಮೇ 25ರಂದು ನ್ಯಾಯಾಲಯ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು ಸೇರಿದಂತೆ ಎಲ್ಲ ಆರೋಪಗಳಲ್ಲಿಯೂ ತಾನು ತಪ್ಪಿತಸ್ಥ ಎಂದು ಮೇ 10ರಂದು ಮಲಿಕ್ ತಪ್ಪೊಪ್ಪಿಗೆ ನೀಡಿದ್ದ. 2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದ ಚಟುವಟಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಯಾಸಿನ್ ಮಲಿಕ್ 2019ರಿಂದಲೂ ದೆಹಲಿಯ ಭಾರಿ ಭದ್ರತೆಯ ತಿಹಾರ್ ಜೈಲಿನಲ್ಲಿದ್ದಾನೆ. ಆತನ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಗುಂಪು ಅಥವಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-B (ಅಪರಾಧ ಸಂಚು) ಮತ್ತು 124-A (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿದೆ. ತನ್ನ ವಿರುದ್ಧ ದಾಖಲಾದ ಆರೋಪಗಳ ವಿರುದ್ಧ ಆತ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.