Friday, November 15, 2024
ಬೆಂಗಳೂರುರಾಜ್ಯಶಿಕ್ಷಣಸುದ್ದಿ

SSLC ಫಲಿತಾಂಶ ಪ್ರಕಟ ; 10 ವರ್ಷಗಳಲ್ಲೇ ಇದು ದಾಖಲೆಯ ಫಲಿತಾಂಶ – ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ; ರಿಸಲ್ಟ್‌ ವೀಕ್ಷಿಸುವುದು ಹೇಗೆ? – ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.

ಜಾಹೀರಾತು
ಜಾಹೀರಾತು
ಜಾಹೀರಾತು

 ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಫಲಿತಾಂಶ ವೀಕ್ಷಣೆ ಹೇಗೆ?
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.