Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ : ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮ : ಸತ್ಯ, ಅಹಿಂಸೆ, ತ್ಯಾಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು – ಕಿರಣ್ ಚಂದ್ರ ರೈ ಬಿ – ಕಹಳೆ ನ್ಯೂಸ್

ಬೆಟ್ಟಂಪಾಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಿರಣ್ ಚಂದ್ರ ರೈ ಬಿ ಗಾಂಧೀಜಿಯವರ ತತ್ವಗಳಾದ ಸತ್ಯ, ಅಹಿಂಸೆ, ತ್ಯಾಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಅಲ್ಲದೆ ರಾಷ್ಟ್ರಪ್ರೇಮ ಮೂಡಿಸುವ, ವಿನಯ ಸಂಪಾದಿಸುವ, ಪರಿಶ್ರಮದ ಮಹತ್ವ ಅರಿಯಪಡಿಸುವ ರಾಷ್ಟ್ರೀಯ ಸೇವಾ ಯೋಜನೆ ಗಾಂಧೀಜಿಯವರ ತತ್ವಾದರ್ಶಗಳನ್ನು ಒಳಗೊಂಡಿದ್ದು ಗ್ರಾಮಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಟ್ಟಂಪಾಡಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಜ್ಯೋತಿ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸೇವೆಯಲ್ಲಿ ತೊಡಗಿಸಿಕೊಂಡು, ಆ ಮೂಲಕ ಸುಸ್ಥಿರ ಸಮಾಜವನ್ನು ನಿರ್ಮಾಣ ಮಾಡಿ, ಸುಭದ್ರ ರಾಷ್ಟ ಕಟ್ಟುವಲ್ಲಿ ನೇರವಾಗಬೇಕು ಎಂದು ಹೇಳಿದರು.

ವೈಭವಿ ಕಲಾ ಭವನದಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಭಟ್ ಉಪಸ್ಥಿತರಿದ್ದರು. ಅಲ್ಲದೆ, ಶಿಬಿರಾಧಿಕಾರಿಗಳು, ಸಹ ಶಿಬಿರಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ದಿವ್ಯ ಸ್ವಾಗತಿಸಿದರು, ಜಯಶ್ರೀ ಅತಿಥಿ ಪರಿಚಯ ನೀಡಿದರು, ಪುಣ್ಯಶ್ರೀ ರೈ ಜಿ ದಾನಿಗಳ ವಿವರ ವಾಚಿಸಿದರು, ಸುಶ್ಮಿತಾ ವಂದಿಸಿದರು, ಪೂಜಾ ಮತ್ತು ಅನನ್ಯ ಎಸ್ ಕಾರ್ಯಕ್ರಮ ನಿರೂಪಿಸಿದರು.