Recent Posts

Monday, January 20, 2025
ಪುತ್ತೂರು

ಪುತ್ತೂರು: ವಿವಿಧ ಸರಕಾರಿ ಶಾಲೆಗಳ ನೂತನ ಕಟ್ಟಡ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮೇ.20 ರಂದು ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ರವರು ಪುತ್ತೂರಿಗೆ ಭೇಟಿ-ಕಹಳೆ ನ್ಯೂಸ್

ಪುತ್ತೂರು: ವಿವಿಧ ಸರಕಾರಿ ಶಾಲೆಗಳ ನೂತನ ಕಟ್ಟಡ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮೇ.20 ರಂದು ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ರವರು ಪುತ್ತೂರಿಗೆ ಆಗಮಿಸಲಿದ್ದಾರೆ.

ಮೇ.20 ರಂದು ಮಧ್ಯಾಹ್ನ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ತಾಲೂಕು ಮಟ್ಟದ ವಿವಿಧ ಶೈಕ್ಷಣಿಕ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು  ಕೊಂಬೆಟ್ಟಿನಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ 5 ಗಂಟೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯರಿನಲ್ಲಿ ನೂತನ ಶಾಲಾ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮತ್ತು ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಸಂಜೆ 6.30ಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಶಾಲೆಯ ಸಂಯೋಜಕರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು