Recent Posts

Saturday, November 16, 2024
ಸುದ್ದಿ

ಕೆನಡಾ ಸಂಸತ್ ನಲ್ಲಿ ಕರುನಾಡ ಕಂಪು ಪಸರಿಸಿದ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ – ಕಹಳೆ ನ್ಯೂಸ್

ಕೆನಡಾ : ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಇತಿಹಾಸ ನಿರ್ಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರರಾಗಿರುವ ಚಂದ್ರ ಆರ್ಯ ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿ0ಗ್‌ನಲ್ಲಿ ಪದವಿ ಪಡೆದ ಚಂದ್ರ ಆರ್ಯ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು.
ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದ ಚಂದ್ರ ಆರ್ಯ 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು” ಎಂದು ಅವರು ಬರೆದುಕೊಂಡಿದ್ದಾರೆ.