ಮಾಣಿ: ಏಕಲವ್ಯ ಪ್ರಶಸ್ತಿ ಪಡೆದ ದ.ಕ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ-ಕಹಳೆ ನ್ಯೂಸ್
ಬಂಟ್ವಾಳ: ವಿಶ್ವಕಪ್ ನಲ್ಲಿ ಕಬಡ್ಡಿ ಆಟವಾಡಿದ ಖ್ಯಾತ ಕಬಡ್ಡಿ ಆಟಗಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಉದಯ ಚೌಟ ಅವರು ಅರೋಗ್ಯ ಸಮಸ್ಯೆಯಿಂದ ಮೇ.21 ರಂದು
ನಿಧನರಾದರು.
- ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ
ಉದಯ ಚೌಟ ರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತ ತಂಡ ಇರಾನ್ ತಂಡವನ್ನು 29-19 ಅಂತರದಿಂದ
ಗೆದ್ದು ದ್ವಿತೀಯ ಬಾರಿ ಗೆಲುವು ಸಾಧಿಸಿತು. ಭಾರತ
ತಂಡದಲ್ಲಿ ಆಟವಾಡಿದ ಇವರಿಗೆ ‘ಅತ್ಯುತ್ತಮ
ಆಟಗಾರ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಪ್ರಸ್ತುತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್
ಕಚೇರಿಯಲ್ಲಿ ಉಪ ಪ್ರಬಂಧಕರಾಗಿರುವ ಕರ್ತವ್ಯ
ನಿರ್ವಹಿಸುತ್ತಿದ್ದ ಉದಯ ಚೌಟ, ಕ್ರೀಡಾ
ಕೋಟದಲ್ಲಿ 8 ತಿಂಗಳ ಕಾಲ ಏರ್ ಇಂಡಿಯಾ
ಮತ್ತು 10 ತಿಂಗಳ ಕಾಲ ಕೆಪಿಟಿಸಿಎಲ್
ಉದ್ಯೋಗದಲ್ಲಿದ್ದರು. ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರಕಾರಿ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಇವರು ವಿದ್ಯಾರ್ಥಿ ದೆಸೆಯಿಂದಲೂ ಕ್ರೀಡಾಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು. ಪಿಯುಸಿಯಲ್ಲಿ ವಾಲಿಬಾಲ್,
ಕಬಡ್ಡಿಯಲ್ಲಿ ಆಸಕ್ತಿ ಹೊಂದಿದ್ದರು.
ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ
ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ್ ಚೌಟ ರವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ರೆನ್‌ಗೆ ಮಂಗಳೂರು ವಿವಿಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. 1993 ರಲ್ಲಿ ಜ್ಯೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಇವರು 2000 ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು.
ಇವರ ಕ್ರೀಡಾ ಸಾಧನೆಗೆ ಹಲವಾರು ಪ್ರಶಸ್ತಿಗಳು
ಇವರಿಗೆ ಸಂದಾಯವಾಗಿದೆ. ದ.ಕ ಜಿಲ್ಲೆಯ
ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ
ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ
ಸಲ್ಲಿಸುತ್ತಿದ್ದಾರೆ.
ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ
ಆಟಗಾರ:
2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ
ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ
ಪದಕವನ್ನು ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ
ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ
ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ
ಬಾರಿಗೆ ಪಡೆದ ಹೆಗ್ಗಳಿಕೆ ಇವರದ್ದು. 20 ವರ್ಷಗಳ
ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ
ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300
ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.
ಮೃತರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು
ಅಗಲಿದ್ದಾರೆ.